ದಾವಣಗೆರೆ : ಅತೃಪ್ತ ಶಾಸಕರ ವಿರುದ್ಧ ಹೇಳಿಕೆ ನೀಡುತ್ತಿರುವ ಡಿಸಿಎಂ ಲಕ್ಷ್ಮಣ್ ಸವದಿ ವಿರುದ್ಧ ಶಾಸಕ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಅಲ್ಪನಿಗೆ ಐಶ್ವರ್ಯ ಬಂದರೆ ಏನ್ ಮಾಡುತ್ತಾರೋ ಅದೇರೀತಿ ಡಿಸಿಎಂ ಲಕ್ಷ್ಮಣ್ ಸವದಿ ಸ್ಥಿತಿಯಾಗಿದೆ. ನಿಜಕ್ಕೂ ಲಕ್ಷ್ಮಣ್ ಸವದಿ ವರ್ತನೆ ಸರಿಯಲ್ಲ. ಅತೃಪ್ತ ಶಾಸಕರ ಬಗ್ಗೆ ವಿನಾಕಾರಣ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಬರುತ್ತದೆ. ಈ ವಿಚಾರದ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತರುತ್ತೇನೆ ಎಂದು ಹೇಳಿದ್ದಾರೆ.