ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನಿಕಟಪೂರ್ವ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ಕಾಯ್ದೆ ಬದಲು ಹಳೆಯ ಎಪಿಎಂಸಿ ಕಾಯ್ದೆಯನ್ನೆ ಮರುಜಾರಿಗೊಳಿಸುವ ತೀರ್ಮಾನಕ್ಕೆ ಈಗಿನ ಕಾಂಗ್ರೆಸ್ ಸರ್ಕಾರ ಬಂದಿದೆ. ಇಡೀ ದೇಶಕ್ಕೆ ಮಾದರಿಯಾಗಿದ್ದ ಕರ್ನಾಟಕ ಎಪಿಎಂಸಿ ಕಾಯ್ದೆಯ ಬದಲಾಗಿ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆದು ಮೂಲ ಕಾಯ್ದೆಯನ್ನು ಮತ್ತಷ್ಟು ಸುಧಾರಣೆಗಳೊಂದಿಗೆ ಮರು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.