ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಒಟ್ಟು ಎಂಟು ಮಾದರಿಗಳ ಪೈಕಿ ಐದು ವರದಿಗಳು ಬಂದಿವೆ. ಬೆಳಗಾವಿ ಜಿಲ್ಲೆಯಿಂದ ಪರೀಕ್ಷೆಗೆ ಕಳಿಸಲಾಗಿದ್ದ ಮಾದರಿಗಳ ಪೈಕಿ ಐದು ವರದಿಗಳು ನೆಗೆಟಿವ್ ಬಂದಿವೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.ಎಂಟು ಮಾದರಿಗಳ ಪೈಕಿ ಇನ್ನು ಮೂರು ಮಾದರಿಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇದುವರೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿರುವ ಒಟ್ಟಾರೆ 21 ಮಾದರಿಗಳ ಪೈಕಿ ಇದೀಗ ಒಟ್ಟಾರೆ 18 ನೆಗೆಟಿವ್