ಮುರುಘಾ ಮಠದ ಶಿವಮೂರ್ತಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಹಿನ್ನೆಲೆ ಪೀಠದ ಕಾರ್ಯ ವೈಖರಿ ಹಾಗೂ ಅಲ್ಲಿನ ಸ್ಥಿತಿಗತಿಗಳ ಕುರಿತು ಜಿಲ್ಲಾಧಿಕಾರಿ ದಿವ್ಯಪ್ರಭು 5 ಪುಟದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಸರ್ಕಾರದ ಆದೇಶದಂತೆ ವಾಸ್ತವಾಂಶದ ವರದಿ ಸಲ್ಲಿಸಿದ್ದೇನೆ. ವರದಿ ಪರಿಶೀಲಿಸಿ ಸರ್ಕಾರ ಮುಂದಿನ ಕ್ರಮ ಜರುಗಿಸಲಿದೆ, ಎಂದು ಅವರು ತಿಳಿಸಿದರು. ಶಿವಮೂರ್ತಿಯ ಬಂಧನದ ನಂತರ ನವೆಂಬರ್ 4ರಂದು ಮಠದ ಸ್ಥಿತಿಗತಿ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸರ್ಕಾರ ಸೂಚನೆ ನೀಡಿತ್ತು.