ಬೆಂಗಳೂರು : 2022ರ ಬಜೆಟ್ನಲ್ಲಿ ಹಿಂದುಳಿದ ವರ್ಗಗಳ ಪ್ರತಿಯೊಂದು ಅಭಿವೃದ್ದಿ ನಿಗಮಗಳಿಗೆ, ಹೆಚ್ಚಿನ ಮೊತ್ತದ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಮ್.ಸಿ. ವೇಣುಗೋಪಾಲ್ ನೇತೃತ್ವದ ತಂಡ ಭೇಟಿ ನೀಡಿ ಮನವಿ ಸಲ್ಲಿಸಿದೆ.2022ರ ಸಾಲಿನ ಬಜೆಟ್ನಲ್ಲಿ ಹಿಂದುಳಿದ ವರ್ಗಗಳ ಪ್ರತಿಯೊಂದು ನಿಗಮಗಳಿಗೆ 50 ಕೋಟಿ ಅನುದಾನ ನೀಡಬೇಕು. ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ, ವಿದ್ಯಾರ್ಥಿ ನಿಲಯಗಳಿಗೆ, ವಿದ್ಯಾರ್ಥಿ ವೇತನಕ್ಕೆ ಮತ್ತು