ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಅಸ್ಥಿರಗೊಳಿಸಲು ಆಯಾ ಪಕ್ಷಗಳ ಶಾಸಕರನ್ನು ಸೆಳೆಯಲು ರೆಸಾರ್ಟ ರಾಜಕಾರಣಕ್ಕೆ ಸಿದ್ಧತೆ ನಡೆಸಿದ್ದ ಬಿಜೆಪಿ ಇದೀಗ ತನ್ನ ನಿರ್ಧಾರದಿಂದ ಯು ಟರ್ನ ಹೊಡೆದಿದೆ ಎನ್ನಲಾಗಿದೆ.ರಾಜ್ಯ ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆದುಕೊಂಡು ರೆಸಾರ್ಟಗೆ ಕಳಿಸಲು ಸಿದ್ಧತೆ ನಡೆಸಿದ್ದ ಬಿಜೆಪಿ ತನ್ನ ನಿರ್ಧಾರದಿಂದ ಈಗ ಹಿಂದಕ್ಕೆ ಸರಿದಿದೆ ಎನ್ನುವ ಮಾತುಗಳು ಕೇಳಿಬರಲಾರಂಭಿಸಿದೆ.ಸಮ್ಮಿಶ್ರ ಸರಕಾರ ಅಸ್ಥಿರಗೊಳಿಸುವ ಯತ್ನಕ್ಕೆ ಬಿಜೆಪಿ ಮುಂದಾಗಿದೆ ಎಂದು ಸಿಎಂ