ಹುಬ್ಬಳ್ಳಿಯಲ್ಲಿ ಲಾಕ್ ಡೌನ್ ನಿರ್ಬಂಧ ಮುಂದುವರೆಸಲಾಗಿದ್ದರೆ, ಧಾರವಾಡದಲ್ಲಿ ಕೊಂಚ ರಿಲೀಫ್ ನೀಡಲಾಗಿದೆ. ಧಾರವಾಡ ಜಿಲ್ಲೆಯು ಕಿತ್ತಳೆ ವಲಯದಲ್ಲಿದೆ. ಹುಬ್ಬಳ್ಳಿ ಶಹರ ಹೊರತುಪಡಿಸಿ, ಧಾರವಾಡ ನಗರದಲ್ಲಿ ಕೆಲವು ಷರತ್ತುಗಳೊಂದಿಗೆ ಹಾಗೂ ಜಿಲ್ಲೆಯಾದ್ಯಂತ ಇತರ ತಾಲ್ಲೂಕುಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯ ಸೇವೆಗಳ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗುವುದು. ಸಾರ್ವಜನಿಕರು ಸೂಕ್ತ ಆರೋಗ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಇದರ ಸದುಪಯೋಗ ಪಡೆಯಬೇಕು ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ