ಬೆಂಗಳೂರು : ಕೆಜೆಪಿ ಮತ್ತು ಬಿಜೆಪಿ ಒಂದಾಗುವ ಕಾಲ ಸನ್ನಿಹಿತವಾಗಿದೆ. ಸಂದರ್ಶನದಲ್ಲಿ ಧನಂಜಯ ಕುಮಾರ್ ಈ ವಿಷಯವನ್ನು ಖಚಿತಪಡಿಸಿದ್ದಾರೆ. ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಿದರೆ ಮಾತ್ರ ಕೆಜೆಪಿ ನಾಯಕ ಯಡಿಯೂರಪ್ಪ ಅವರು ಬಿಜೆಪಿಗೆ ವಾಪಸಾಗುವುದಕ್ಕೆ ಸಿದ್ಧ ಎಂದು ಕೆಜೆಪಿ ವಕ್ತಾರ ವಿ ಧನಂಜಯ ಕುಮಾರ್ ತಿಳಿಸಿದ್ದಾರೆ.ಬಿಜೆಪಿ ಮೂಲ ತತ್ವಗಳಿಗೆ ನಾವೆಂದೂ ವಿರೋಧ ಹೊಂದಿದವರಲ್ಲ. ಈಗ ಕೆಜೆಪಿ ಸಿದ್ಧಾಂತಕ್ಕೆ ಧಕ್ಕೆ ಬಾರದಂತೆ ಪೂರಕ ವಾತಾವರಣ ನಿರ್ಮಾಣವಾದರೆ ಬಿಜೆಪಿ ಜತೆ ಮರುಸೇರ್ಪಡೆಗೆ