ಹಾಸನ : ಈಶ್ವರಪ್ಪಗೆ ಮಾನ ಮಾರ್ಯಾದೆ ಇದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಕಾಲಿಗೆ ಬೀಳಲಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಈಶ್ವರಪ್ಪ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ನಿಂಬೆಹಣ್ಣು ಸಹಿತ ರೇವಣ್ಣನನ್ನೇ ನುಂಗುತ್ತೇನೆ ಎಂದ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರೇವಣ್ಣ, ಕೆ.ಎಸ್.ಈಶ್ವರಪ್ಪನಂಥವರನ್ನು ನಮ್ಮೂರಿನ ಶಿವನೇ ನುಂಗುತ್ತಾನೆ. ಅವರು ಏನು ಅಂತ ಎಲ್ಲರಿಗೂ ಗೊತ್ತಿದೆ. ಅವನು ಒಂದು ರೀತಿ ಬುಡುಬುಡುಕೆ ಇದ್ದಂತೆ.