ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಿಗೆ ಫಲಾನುಭವಿಗಳಿಗೆ ನೀಡಲು ಉದ್ದೇಶಿಸಿರುವ ಹಣವನ್ನು ನಾಳೆಯಿಂದಲೇ ಖಾತೆಗೆ ಜಮೆ ಮಾಡಲು ಸಾಧ್ಯವಿಲ್ಲ. ಇನ್ನು 10-15 ದಿನಗಳ ಕಾಲ ಸಮಯ ಬೇಕಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ್ರ ಹೇಳಿದ್ದಾರೆ. ಹೇಳಿದ್ದಾರೆ.ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ 5 ಕೆಜಿ ಅಕ್ಕಿ ಬದಲಿಗೆ ಹಣ ಜಮೆ ಮಾಡುವ ಕುರಿತು ʻಪಬ್ಲಿಕ್ ಟಿವಿʼಯೊಂದಿಗೆ ಜ್ಞಾನೇಂದ್ರ ಅವರು ಮಾತನಾಡಿದ್ದಾರೆ.