ಮೇಖ್ರಿ ವೃತ್ತದಿಂದ ಕಾವೇರಿ ಜಂಕ್ಷನ್ ವರೆಗೆ ರಸ್ತೆ ವಿಸ್ತರಣೆ ಮಾಡಲಾಗಿದ್ದು,ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ.ದ್ವಿಪಥ ರಸ್ತೆ ಮೂರು ಪಥದ ರಸ್ತೆಯಾಗಿ ಪರಿವರ್ತನೆ ಸುಮಾರು 1260 ಮೀಟರ್ ಉದ್ದವಿರುವ ಈ ಮಾರ್ಗ ಮೇಖ್ರಿ ವೃತ್ತದಿಂದ ಆರು ಪಥಗಳ ರಸ್ತೆಯಿದ್ದು, ಗಾಯಿತ್ರಿ ವಿಹಾರ್ ಬಳಿಯಲ್ಲಿ ಸಣ್ಣದಾಗಿ ಕೇವಲ ಎರಡು ಪಥಗಳಾಗಿದೆ. ಅರಮನೆ ಮೈದಾನದ 4ನೇ ದ್ವಾರದಿಂದ ಕಾವೇರಿ ಚಿತ್ರಮಂದಿರದವರೆಗೂ ಕೇವಲ ಎರಡು ಪಥಗಳಾಗಿದೆ.