ಮಂಗಳೂರು ನಗರದ ನೀರುಮಾರ್ಗದ ಜಂಕ್ಷನ್ ಸಮೀಪದಲ್ಲಿರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರಕ್ಕೆ ನುಗ್ಗಿದ ಇಬ್ಬರು ಕಳ್ಳರು ಕಾಣಿಕೆ ಡಬ್ಬಿ ಕಳವುಗೈದಿರುವ ಘಟನೆ ನಡೆದಿದೆ. ಇದರ ಸಂಪೂರ್ಣ ದೃಶ್ಯ ಭಜನಾ ಮಂದಿರದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಭಜನಾ ಮಂದಿರದ ಮುಂಭಾಗಕ್ಕೆ ನಸುಕಿನ ವೇಳೆ 1.45ರ ಸುಮಾರಿಗೆ ಆಗಮಿಸಿದ್ದ ಕಳ್ಳರು ಮುಂಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ್ದಾರೆ. ಬಳಿಕ ಉತ್ತರದ ಬಾಗಿಲು ತೆರೆದು ಪ್ರಧಾನ ಗುಡಿಯ ಮುಂಭಾಗದಲ್ಲಿರುವ ಕಾಣಿಕೆ ಡಬ್ಬಿಯನ್ನು ಹೊರಗೆ ಸಾಗಿಸಿದ್ದಾರೆ. ಕೆಲವು