ಮೈಸೂರಿನಲ್ಲಿ ಹಾಡು ಹಗಲೇ ದರೋಡೆ ನಡೆದಿದೆ. ಮಹಿಳೆಯನ್ನು ಕಟ್ಟಿಹಾಕಿ ಚಿನ್ನ ದೋಚಿ ಖದೀಮರು ಪರಾರಿಯಾದ ಘಟನೆ ಮೈಸೂರಿನ ನಂಜನಗೂಡಿನ ರಾಮಸ್ವಾಮಿ ಬಡಾವಣೆ ಒಂದನೇ ಬ್ಲಾಕ್ನಲ್ಲಿ ನಡೆದಿದೆ. ಪ್ರೌಢಶಾಲಾ ಶಿಕ್ಷಕ ಶಂಭುಸ್ವಾಮಿ ಎಂಬುವವರ ಪತ್ನಿ ದಾಕ್ಷಾಯಿಣಿ ಚಿನ್ನ ಕಳೆದುಕೊಂಡು ಮಹಿಳೆಯಾಗಿದ್ದಾರೆ. ಡೂಪ್ಲಿಕೇಟ್ ಪಾರ್ಸಲ್ ಬಾಕ್ಸ್ ಹಿಡಿದು ಬಂದು ಕಳ್ಳರು, ಪಾರ್ಸಲ್ ಬಂದಿದೆ ಎಂದು ಬಾಗಿಲು ತೆಗೆಯಿಸಿ ಎಂದಿದ್ದಾನೆ. ನಂತರ ಮಹಿಳೆಯನ್ನು ಬೆದರಿಸಿ ಕೈಕಾಲು ಕಟ್ಟಿ ಬಾಯಿಗೆ ಪ್ಲಾಸ್ಟರ್ ಅಂಟಿಸಿ ದರೋಡೆ ಮಾಡಿದ್ದಾರೆ.