ಮೈಸೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಟ್ಟೆ ಬ್ಯಾಗ್ ಖರೀದಿ ಅವ್ಯವಹಾರ ಪ್ರಕರಣಕ್ಕೆ ಮರುಜೀವ ಸಿಕ್ಕಿದ್ದು, ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಮೈಸೂರು ಡಿಸಿ ಆಗಿದ್ದ ಸಂದರ್ಭದಲ್ಲಿ ಕೇಳಿ ಬಂದಿದ್ದ ಬಟ್ಟೆ ಬ್ಯಾಗ್ ಖರೀದಿ ಅವ್ಯವಹಾರ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ.ಕೂಡಲೇ ಪ್ರಕರಣದ ತನಿಖೆ ಮಾಡಿ ವರದಿ ನೀಡುವಂತೆ ಮೈಸೂರು ಜಿಲ್ಲಾಧಿಕಾರಿ