ಮೈಸೂರು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಐಎಎಸ್ ಅಧಿಕಾರಿಗಳಿಬ್ಬರ ಕಲಹಕ್ಕೆ ಸರ್ಕಾರ ಕೊನೆಗೂ ಪರಿಹಾರ ಕಂಡುಕೊಂಡಿದೆ. ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಮತ್ತು ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾ ನಾಗ್ ಇಬ್ಬರನ್ನೂ ವರ್ಗಾವಣೆ ಮಾಡಿದೆ. ರೋಹಿಣಿ ಸಿಂಧೂರಿಗೆ ಹಿಂದೂ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಹೊಣೆ, ಶಿಲ್ಪಾ ನಾಗ್ ಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಇ ಆಡಳಿತ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.ಒಂದು ವೇಳೆ ಒಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದರೆ ಸರ್ಕಾರ ಜನರ