ಬೆಂಗಳೂರು: ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮಹಮದ್ ನಲಪಾಡ್ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಶನಿವಾರ ರಾತ್ರಿ ಯುಬಿ ಸಿಟಿಯ ರೆಸ್ಟೊರೆಂಟ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ನಲಪಾಡ್ ಮತ್ತು ಆತನ ಸ್ನೇಹಿತರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವುದರ ಕುರಿತು ಆರೋಪಿಸಲಾಗಿದೆ.