ರೌಡಿಶೀಟರ್ ಸೂರಿಯನ್ನು ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಕುಣಿಗಲ್ ನ ಹುಲಿಯೂರು ದುರ್ಗ ಬೈಪಾಸ್ ಬಳಿ ಬರ್ಬರವಾಗಿ ಹತ್ಯೆಗೈಯಲಾಗಿದೆ. ಕಾರಿನಲ್ಲಿ ತೆರಳುತ್ತಿದ್ದ ಸೂರಿಯನ್ನು ಮತ್ತೊಂದು ಕಾರಿನಲ್ಲಿ ಅಡ್ಡಗಟ್ಟಿದ ನಾಲ್ವರು ನಡುರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.