ಪೊಲೀಸರ ಕೈಗೆ ಸಿಗದಂತೆ ತಲೆಮರೆಸಿಕೊಂಡಿರುವ ರೌಡಿ ಶೀಟರ್ ನಾಗರಾಜ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾನೆ. ಬೆಂಗಳೂರಿನ 11ನೇ ಎಸಿಎಂಎಂ ಕೋರ್ಟ್`ಗೆ ನಾಗರಾಜ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣ ನಡೆದಿರುವುದು ಶ್ರೀರಾಮಪುರದಲ್ಲಿ, ಹೆಣ್ಣೂರು ಪೊಲೀಸರಿಗೂ ಪ್ರಕರಣಕ್ಕೂ ಸಂಬಂಧವಿಲ್ಲ. ನಾನು ಸಮಾಜಸೇವೆಯಲ್ಲಿ ತೊಡಗಿಕೊಂಡಿದ್ದೇನೆ. ಸಮಾಜ ವಿರೋಧಿ ಚಟುವಟಿಕೆ ನಡೆಸಿಲ್ಲ. ದೂರು ನೀಡಿದ ವ್ಯಕ್ತಿಯೇ ಯಾರೆಂದೂ ನನಗೆ ಗೊತ್ತಿಲ್ಲ. ಬ್ಲ್ಯಾಕ್ ಅಂಡ್ ವೈಟ್ ದಂಧೆಯಲ್ಲಿ ಬಂಧಿತನಾಗಿರುವ ವ್ಯಕ್ತಿಯ ದೂರಿನನ್ವಯ ಈ ದಾಳಿ ನಡೆಸಲಾಗಿದೆ