ಪ್ರತೀ ಬರ ಪೀಡಿತ ತಾಲ್ಲೂಕುಗಳಿಗೆ ಈವರಗೆ ತಲಾ ರೂ.1.65 ಕೋಟಿ ಒದಗಿಸಲಾಗಿದೆ, ಇದಲ್ಲದೆ 14ನೇ ಹಣಕಾಸು ಆಯೋಗದಿಂದ ಜಿಲ್ಲೆಗೆ 54ಕೋಟಿ ರೂಪಾಯಿ ಒದಗಿಸಲಾಗಿದೆ ಅದನ್ನುಸದ್ಬಳಕೆ ಮಾಡಿಕೊಂಡು ನೀರಿನ ಸಮಸ್ಯೆ ನಿಬಾಯಿಸಿ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಎ ಮಂಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾಧ್ಯವಾದಷ್ಟು ಮಟ್ಟಿಗೆ ಶಾಶ್ವತ ನೀರು ಸರಬರಾಜು ಯೋಜನೆಗಳನ್ನು ಜಾರಿಗೊಳಿಸಿ ಎಂದು ಸಚಿವರು ಹೇಳಿದರು. ಹಾಸನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬರ ಪರಿಹಾರ