ಹೈದ್ರಾಬಾದ ಕರ್ನಾಟಕದ ಪ್ರತಿ ಜಿಲ್ಲೆಗಳಲ್ಲಿ ಶಿಕ್ಷಕರ ಭವನಕ್ಕಾಗಿ ಈಗಾಗಲೆ ಸರ್ಕಾರ ತಲಾ 1 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಕಲಬುರಗಿ ನಗರದಲ್ಲಿ ಶಿಕ್ಷಕರ ಭವನಕ್ಕಾಗಿ ಜಿಲ್ಲಾಧಿಕಾರಿಗಳು ಸಿ.ಎ. ನಿವೇಶನ ಒದಗಿಸಿದಲ್ಲಿ ಭವ್ಯವಾದ ಶಿಕ್ಷಕರ ಭವನ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ತಿನ ಶಾಸಕ ಶರಣಪ್ಪ ಮಟ್ಟೂರ ಹೇಳಿದರು.ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜಿಸಲಾದ 2018-19ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ