ರಾಜ್ಯದಲ್ಲಿ ಪ್ರವಾಹ ಸಂತ್ರಸ್ತರ ನೆರವಿಗೆ ಇರುವ 700 ಕೋಟಿ ರೂ. ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ನೆರೆ ಪರಿಹಾರ ಕುರಿತು ತುರ್ತು ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯಿಂದಾಗಿ 466 ಗ್ರಾಮಗಳಿಗೆ ಹಾನಿಯಾಗಿದ್ದು, 13 ಮಂದಿ ಮೃತಪಟ್ಟಿದ್ದಾರೆ ಎಂದರು. ನೆರೆ ಪರಿಹಾರಕ್ಕಾಗಿ ರಾಜ್ಯ ಸರಕಾರ 510ಕೋಟಿ ರೂ. ಬಿಡುಗಡೆ ಮಾಡಿದ್ದು, ತುರ್ತು ಕಾಮಗಾರಿಗೆ 600 ಕೋಟಿ ರೂ. ಬಿಡುಗಡೆ ಮಾಡಲಾಗುವುದು.