ಸರ್ಕಾರವು ಹೆಚ್.ಕೆ.ಆರ್.ಡಿ.ಬಿ.ಗೆ ಕಳೆದ ವರ್ಷದಿಂದ ಪ್ರತಿ ವರ್ಷ 1500 ಕೋಟಿ ರೂ.ಗಳ ಅನುದಾನ ಒದಗಿಸಲು ವಾಗ್ದಾನ ನೀಡಿದೆ. ಅದಕ್ಕನುಗುಣವಾಗಿ ಹೆಚ್.ಕೆ.ಆರ್.ಡಿ.ಬಿ.ಯಿಂದ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದರು. ಕಲಬುರಗಿಯ ನಾಗನಹಳ್ಳಿ ರಸ್ತೆಯಲ್ಲಿರುವ ಹನುಮಾನ ತಾಂಡಾದಲ್ಲಿ ಸಾರ್ವಜನಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಹೆಚ್.ಕೆ.ಆರ್.ಡಿ.ಬಿ. ಸಭೆ ನಡೆಯಲಿದ್ದು, ಸರ್ಕಾರ ನೀಡಿರುವ ವಾಗ್ದಾನದಂತೆ ಹೆಚ್.ಕೆ.ಆರ್.ಡಿ.ಬಿ.ಗೆ ಅನುದಾನ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ, ಹಣಕಾಸು ಸಚಿವರಿಗೆ ಹಾಗೂ ಕಾರ್ಯದರ್ಶಿಗಳ ಮೇಲೆ