ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಗಂಭೀರ ಪರಿಸ್ಥಿತಿ ಎದುರಾಗಬಹುದೆಂದು ಅಂದಾಜಿಸಲಾಗಿದೆ. ಕುಡಿಯುವ ನೀರು ಸರಬರಾಜಿಗೆ ಮೊದಲ ಆದ್ಯತೆ ನೀಡಿರುವ ಸರ್ಕಾರ ಇದಕ್ಕೆ ರೂ.350 ಕೋಟಿ ಹಣ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ತಿಳಿಸಿದ್ದಾರೆ. ಬರ ಅಧ್ಯಯನಕ್ಕೆ ಸಚಿವರ ನಾಲ್ಕು ತಂಡಗಳು ತೆರಳಿದ್ದು, ಅಧ್ಯಯನ ಮುಗಿದಿದೆ. ವರದಿ ಬಂದ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನುಡಿದ ಸಚಿವರು, ಬರದಿಂದ ರಾಜ್ಯದಲ್ಲಿ ಸುಮಾರು ಮೂರು