ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿಗೀಡಾಗಿರುವವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ಮಾಡಿ ತಾಂತ್ರಿಕ ವರದಿ ಸಲ್ಲಿಸುವಂತೆ ಕೆ. ಡಬ್ಲ್ಯೂ. ಎಸ್.ಎಸ್.ಬಿ ಮುಖ್ಯ ಇಂಜಿನಿಯರ್ ಗೆ ಸೂಚಿಸಲಾಗಿದೆ ಎಂದರು. ರಾಯಚೂರಿನ ಎಲ್ಲಾ ವಾರ್ಡ್ ಗಳ