ಹುಬ್ಬಳ್ಳಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಕೆಲವರನ್ನು ಎತ್ತಿಕಟ್ಟಿ ಆರ್.ಎಸ್.ಎಸ್. ಕಾರ್ಯಕರ್ತರನ್ನು ಹತ್ಯೆ ನಡೆಸಲು ಕುಮ್ಮಕ್ಕು ನೀಡುತ್ತಿದೆ ಎಂದು ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುತ್ತ, ವರ್ಗ ಸಂಘರ್ಷಕ್ಕೆ ಮುನ್ನುಡಿ ಬರೆಯುತ್ತಿದೆ ಎಂದು ಆರೋಪಿಸುತ್ತ, ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು. ಮಂಗಳೂರಿನಲ್ಲಿ ಪ್ರಶಾಂತ ಪೂಜಾರಿ, ಮೈಸೂರಲ್ಲಿ