ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ಬಿಜೆಪಿ ಮುಖಂಡರು, ಅನಗತ್ಯವಾಗಿ ಆರೆಸ್ಸೆಸ್ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ರಾಹುಲ್ ವಿರುದ್ಧ ದೂರು ದಾಖಲಿಸಿದ್ದಾರೆ. ಗೌರಿ ಹತ್ಯೆ ನಡೆಸಿದ ಆರೋಪಿಗಳ ಪತ್ತೆಯಾಗಿಲ್ಲ. ಆದಾಗ್ಯೂ ರಾಹುಲ್ ಆರೆಸ್ಸೆಸ್ ಕೈವಾಡವಿದೆ ಎಂದು ಆರೋಪಿಸುತ್ತಿರುವುದಾಗಿ ಬಿಜೆಪಿ