ಹಾಡುಹಗಲೇ ಆರ್ಎಸ್ಎಸ್ ಹಾಗೂ ಬಿಜೆಪಿ ಕಾರ್ಯಕರ್ತ ರುದ್ರೇಶ್ ಹತ್ಯೆ ಖಂಡಿಸಿ ಸರಣಿ ಹೋರಾಟ ನಡೆಸಲು ರಾಜ್ಯ ಬಿಜೆಪಿ ಘಟಕ ಸಜ್ಜಾಗಿದೆ. ಮಾಜಿ ಡಿಸಿಎಂ ಆರ್.ಅಶೋಕ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ನಾಯಕರು ಸರಣಿ ಹೋರಾಟ ನಡೆಸಲು ತೀರ್ಮಾನ ಕೈಗೊಂಡಿದ್ದಾರೆ. ನಾಳೆ ಶಿವಾಜಿನಗರದಾದ್ಯಂತ ಆರ್ಎಸ್ಎಸ್ ಹಾಗೂ ಬಿಜೆಪಿ ಕಾರ್ಯಕರ್ತ ರುದ್ರೇಶ್ ಶವಯಾತ್ರೆ ನಡೆಸಲು ನಿರ್ಧರಿಸಲಾಗಿದ್ದು, ಅಕ್ಟೋಬರ್ 19 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.