ಮಂಗಳೂರು : ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅಳಿಯ, ಕಾಫಿ ಡೇ ಮಾಲೀಕ ವಿ.ಜಿ ಸಿದ್ದಾರ್ಥ್ ಅವರು ಸೋಮವಾರ ರಾತ್ರಿಯಿಂದ ದಿಢೀರ್ ನಾಪತ್ತೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಶಾಸಕ ಯು.ಟಿ.ಖಾದರ್ ಅವರು ವಿ.ಜಿ ಸಿದ್ದಾರ್ಥ್ ಅವರು ನಾಪತ್ತೆಯಾದ ಮಂಗಳೂರಿನ ಉಳ್ಳಾಲ ಸಮೀಪದ ನೇತ್ರಾವತಿ ನದಿ ಸೇತುವೆ ಬಳಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ಧಾರ್ಥ್ ಅವರು ಈವರೆಗೂ ಸಾವಿರಾರು ಮಂದಿಗೆ ಕೆಲಸ ನೀಡಿದ್ದಾರೆ.