ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆಯಿಂದ ಪಕ್ಷಕ್ಕೆ ಯಾವುದೇ ಲಾಭವಾಗದಿರುವ ಹಿನ್ನೆಲೆಯಲ್ಲಿ ಅವರ ಅಳಿಯನ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೇಂದ್ರ ಸರಕಾರ ವಿಪಕ್ಷಗಳನ್ನು ಬಗ್ಗುಬಡಿಯಲು ಇಂತಹ ದಾಳಿಗೆ ಮುಂದಾಗಿದೆ ಎಂದು ಕಿಡಿಕಾರಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಂಗಳೂರಿಗೆ ಬಂದಾಗಲೂ ಎಸ್.ಎಂ.ಕೃಷ್ಣ ಅವರನ್ನು