ಇಂದು ಬೆಳಗ್ಗೆಯಷ್ಟೇ ಡಾ. ಸುಧಾಕರ್, ಸಿದ್ದರಾಮಯ್ಯನವರ ಪರೋಕ್ಷ ಅಥವಾ ಅಪರೋಕ್ಷ ಪಾತ್ರದ ಕಾರಣದಿಂದಲೇ ಕೆಲವರು ರಾಜೀನಾಮೆ ನೀಡಿದ್ದರು ಎಂದು ಟ್ವೀಟ್ ಮೂಲಕ ಹೇಳಿದ್ದರು. ಇದೀಗ ಅದೇ ಧಾಟಿಯ ಟ್ವೀಟ್ ಒಂದನ್ನು ಎಸ್.ಟಿ ಸೋಮಶೇಖರ್ ಪೋಸ್ಟ್ ಮಾಡಿದ್ದಾರೆ. ತಮ್ಮ ಟ್ವೀಟ್ನಲ್ಲಿ ಎಸ್.ಟಿ ಸೋಮಶೇಖರ್, ಮಾನ್ಯ ಸಿದ್ದರಾಮಯ್ಯನವರು ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ಶಾಸಕರಲ್ಲಿ ತೋಡಿಕೊಳ್ಳುತ್ತಿದ್ದ ಅಸಹಾಯಕತೆ, ಕೊಡುತ್ತಿದ್ದ ಆಶ್ವಾಸನೆ ಇದೇ ಎಂಬುದು ಸತ್ಯ. ಸಿದ್ದರಾಮಯ್ಯನವರ ಅಸಹಾಯಕತೆ ಸಹ ನಾವು ಪಕ್ಷ ಬಿಡಲು ಒಂದು