ಚಿಕ್ಕೋಡಿ : ನನ್ನನ್ನು ಯಾಕೆ ಡಿಸಿಎಂ ಸ್ಥಾನದಿಂದ ತೆಗದ್ರಿ? ಏನ್ ತಪ್ಪು ಮಾಡಿದ್ದೆ, ಯಾರನ್ನಾದರೂ ರೇಪ್ ಮಾಡಿದ್ನಾ? ಯಾವ ಅಪರಾಧದ ಮೇಲೆ ತೆಗೆದು ಹಾಕಿದ್ರಿ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಅಸಮಾಧಾನ ವ್ಯಕ್ತಪಡಿಸಿದರು. ಸೋತರು ಪಕ್ಷ ಡಿಸಿಎಂ ಮಾಡಿದ್ರು ಪಕ್ಷ ಬಿಡ್ತಿದ್ದಾರೆ ಎಂದು ಬಿಜೆಪಿ ನಾಯಕರ ಮಾತಿಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಡಿಸಿಎಂ ಸ್ಥಾನ ಕೊಡಬೇಕೆಂದು ನಾನು ಕೇಳಿದ್ನಾ? ನನಗೆ ಕೊಟ್ಟ ಮೇಲೆ ಕೆಲಸ ಮಾಡಿದೆ ಎಂದ