ಪೇದೆ ಆಯ್ಕೆಗೆ ಅರ್ಜಿ ಆಹ್ವಾನಿಸಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ ಹಿಂದಿ, ಇಂಗ್ಲೀಷ್ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಈ ಕುರಿತು ಸಿದ್ದರಾಮಯ್ಯ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ ನಾನಾ ಭದ್ರತಾ ಪಡೆಗಳ ಸಿಬ್ಬಂದಿ ಆಯ್ಕೆಗೆ ಜನವರಿಯಲ್ಲಿ ನಡೆಸಲಿರುವ ಪರೀಕ್ಷೆಗಳಿಂದ ಕನ್ನಡವನ್ನು ಕೈಬಿಟ್ಟು ನಾಡಿನ ಯುವ ಸಮೂಹದ ಸಹನೆಯನ್ನು ಕೇಂದ್ರ ಸರ್ಕಾರ ತೀವ್ರವಾಗಿ ಕೆಣಕುತ್ತಿದ್ದು, ಇದನ್ನು ಇನ್ನು ಸಹಿಸಲು ಸಾಧ್ಯವಿಲ್ಲ ಎಂದು ಖಂಡಿಸಿದ್ದಾರೆ.