ಕರುನಾಡಿನಲ್ಲಿ ಡೆಡ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, 73 ಜನರನ್ನು ಬಲಿ ಪಡೆದುಕೊಂಡಿದೆ. ಕರ್ನಾಟಕದಲ್ಲಿ ಒಂದೇ ದಿನ 2738 ಕೊರೊನಾ ಕೇಸ್ ಗಳು ದೃಢಪಟ್ಟಿವೆ. ಈ ಮೂಲಕ ಒಟ್ಟು ಪಾಸಿಟಿವ್ ಕೇಸ್ ಗಳ ಸಂಖ್ಯೆ 41581 ಕ್ಕೆ ತಲುಪಿದೆ.ಮಾರಕ ವೈರಸ್ ಗೆ 73 ಜನರು ಸಾವನ್ನಪ್ಪಿದ್ದು, ಈವರೆಗೆ ರಾಜ್ಯದಲ್ಲಿ ಕೋವಿಡ್ ಗೆ 757 ಜನರು ಬಲಿಯಾದಂತಾಗಿದೆ.839 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದು, 545 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.