ಕೊರೊನಾ ವೈರಸ್ ತಡೆಗೆ ಹೋರಾಟ ನಡೆಸುತ್ತಿರುವವರಿಗೆ ವಿಭಿನ್ನ ರೀತಿಯಲ್ಲಿ ಗೌರವ ಸಲ್ಲಿಸಲಾಗುತ್ತಿದೆ. ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಗೌರವ ಸಲ್ಲಿಸುವ ಸಲುವಾಗಿ ಹುಬ್ಬಳ್ಳಿ ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಮರಳು ಶಿಲ್ಪವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ವೀಕ್ಷಿಸಿದರು.ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆರು, ದಿನದ 24 ಗಂಟೆ ಕೆಲಸ ನಿರ್ವಹಿಸುತ್ತಿದ್ದಾರೆ.