ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ನ ಉದ್ದೇಶ ಬದಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶವನ್ನು ಸಂಗೊಳ್ಳಿ ರಾಯಣ ಬ್ರಿಗೇಡ್ ಹೊಂದಿತ್ತು. ಆದರೆ, ಇದೀಗ ಬ್ರಿಗೇಡ್ನ ಉದ್ದೇಶ ಬದಲಾಗಿದ್ದು, ಕೇವಲ ದಲಿತರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕೆಲಸ ಮಾಡಲಿದೆ ಎಂದು ಸ್ಪಷ್ಟಪಡಿಸಿದರು. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ