ಬಹುಭಾಷಾ ನಟಿ ಸಂಜನಾ ಗಲ್ರಾನಿ 8 ತಿಂಗಳ ಗರ್ಭಿಣಿಯಾಗಿದ್ದಾರೆ. ಈ ಮಧ್ಯೆ ತಮ್ಮ ತಾಯ್ತನದ ಖುಷಿಯನ್ನು ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಶೇರ್ ಮಾಡಿಕೊಳ್ಳುತ್ತಿದ್ದರು. ಆದರೆ ಭಾನುವಾರ ತಮ್ಮ ಬೋಳುತಲೆ ಫೋಟೋ ಶೇರ್ ಮಾಡಿಕೊಂಡಿದ್ದು, ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಇನ್ಸ್ಟಾದಲ್ಲಿ ಫೋಟೋ ಶೇರ್ ಮಾಡಿರುವ ಸಂಜನಾ, ಸೌಂದರ್ಯವು ನೋಡುವವರ ದೃಷ್ಟಿಯಲ್ಲಿದೆ. ಅದಕ್ಕಾಗಿಯೇ ನಾನು ನನ್ನ ಕೂದಲನ್ನು ತ್ಯಾಗ ಮಾಡಿದ್ದೇನೆ. ನಾನು ದೇವರಿಗೆ ಯಾವ ರೀತಿ ನಮನ ಸಲ್ಲಿಸಬೇಕು ಎಂದು