ಬೆಳಗಾವಿ : ಅಭಿವೃದ್ಧಿ ಕೆಲಸ ಮಾಡಿದ್ದರೆ ಟಿಫಿನ್ ಬಾಕ್ಸ್ ಹಂಚುವ ಅವಶ್ಯಕತೆ ಇರುತ್ತಿರಲಿಲ್ಲ ಎನ್ನುವ ಮೂಲಕ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅಂಜಲಿ ನಿಂಬಾಳ್ಕರ್ಗೆ ಮಾಜಿ ಶಾಸಕ ಸಂಜಯ್ ಪಾಟೀಲ್ ಟಾಂಗ್ ನೀಡಿದರು.ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಂಚುವವರು ಹಂಚುತ್ತಾರೆ. ನಾನು ಸದ್ಯಕ್ಕೆ ಜಿಲ್ಲಾಧ್ಯಕ್ಷನಾಗಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ.ನಾನು ಗಂಡಸಾಗಿ ಹೇಗೆ ಹಳದಿ, ಕುಂಕುಮ ಕಾರ್ಯಕ್ರಮ ಮಾಡೋಕೆ ಆಗುತ್ತದೆ? ಕಾರ್ಯಕ್ರಮ ಮಾಡಲು ಎಲ್ಲರಿಗೂ ಸ್ವಾತಂತ್ರ್ಯವಿದೆ.