40 ರಿಂದ 45 ಕಾಂಗ್ರೆಸ್ನ ಪ್ರಮುಖರು ನನ್ನ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ B.L.ಸಂತೋಷ್ರ ಹೇಳಿಕೆಗೆ ಕಾಂಗ್ರೆಸ್ ಟ್ವೀಟ್ ಮೂಲಕ ತಿರುಗೇಟು ನೀಡಿದೆ. ಸುಳ್ಳು ಹೇಳಿಕೊಂಡು ತಿರುಗುವ ಮುನ್ನ ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಸಾಧಿಸಲಿ.. ಜೊತೆಗೆ ವಿಶ್ವಾಸವನ್ನು ಸಾಧಿಸಲಿ. ಅವರ ಹೇಳಿಕೆ ಶತಮಾನದ ಜೋಕ್ ಎಂದು ಲೇವಡಿ ಮಾಡಿದೆ.. ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು