ಮೈಸೂರು : ಮಂಡ್ಯದಲ್ಲಿ ನಮ್ಮನ್ನ ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಕೂಡ ಪ್ರತಿಧ್ವನಿಸಲಿದೆ ಎಂದು ಹೇಳುವುದರ ಮೂಲಕ ಸಚಿವ ಸಾರಾ ಮಹೇಶ್ ಪರೋಕ್ಷವಾಗಿ ಕಾಂಗ್ರೆಸ್ ಗೆ ಎಚ್ಚರಿಕೆ ಕೊಟ್ಟಿದ್ದಾರೆ. ನಗರದಲ್ಲಿ ಪ್ರಚಾರ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ, ನಮ್ಮ ಅಂತರ ಇದ್ದೆ ಇರುತ್ತದೆ. ಮೈತ್ರಿಯಾಗಿ ಸರ್ಕಾರ ನಡೆಸುತ್ತಿದ್ದೇವೆ. ಮಂಡ್ಯದಲ್ಲಿ ನಮ್ಮನ್ನ ಒಮ್ಮೆ ತಬ್ಬಿಕೊಂಡರೆ ಮೈಸೂರಿನಲ್ಲಿ ನಿಮ್ಮನ್ನ 5 ಬಾರಿ ತಬ್ಬಿಕೊಳ್ಳುತ್ತೇವೆ. ನಿಮಗೆ ಇದು ನೆನಪಿನಲ್ಲಿ ಇರಲಿ.