ಬೆಳಗಾವಿ : ಹಿಂದೂ ಶಬ್ದ ಬಗ್ಗೆ ನೀಡಿದ್ದ ಹೇಳಿಕೆಯು ವಿವಾದವಾಗುತ್ತಿದ್ದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದು ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ.ನಿಪ್ಪಾಣಿ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಹಿಂದೂ ಶಬ್ದದ ಬಗ್ಗೆ ನೀಡಿದ್ದ ಮಾತು ವಿವಾದಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ಪತ್ರ ಬರೆದಿರುವ ಅವರು,ನಾನು ಮಾತನಾಡಿದ್ದ ಹಿಂದೂ ಶಬ್ದದದ ಬಳಕೆ ಕುರಿತು ನನ್ನ ತೇಜೋವಧೆ ಮಾಡಲಾಗುತ್ತಿದೆ. ಅಲ್ಲದೇ ಅದನ್ನು ತಿರುಚಿ ಅಪಪ್ರಚಾರಗೊಳಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ