ಬೆಂಗಳೂರು : ಪಕ್ಷಕ್ಕೆ ರಾಜೀನಾಮೆ ನೀಡಿದ ಶಾಸಕ ರಮೇಶ್ ಜಾರಕಿಹೊಳಿಗೆ ಅವರ ಸಹೋದರ ಸಚಿವ ಸತೀಶ್ ಜಾರಕಿಹೊಳಿ ಬಿಗ್ ಶಾಕ್ ನೀಡಿದ್ದಾರೆ. ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಬೇಸರಗೊಂಡ ಸತೀಶ್ ಜಾರಕಿಹೊಳಿ ಸಹೋದರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದು, ರಮೇಶ್ ಜಾರಕಿಹೊಳಿ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಪಕ್ಷದ ವರಿಷ್ಠರಿಗೆ ಅವರು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಶಾಸಕ ರಮೇಶ್ ಜಾರಕಿಹೊಳಿ ಮನವೊಲಿಸುವ ಪ್ರಶ್ನೆಯೇ ಇಲ್ಲ. ಅವರ ರಾಜೀನಾಮೆ ಬಂಡಾಯ, ಪ್ರಹಸನದಿಂದಾಗಿ