ಬೆಂಗಳೂರು : ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಬೆನ್ನಲ್ಲೇ ಅಸಮಾಧಾನಗೊಂಡಿದ್ದ ಲಕ್ಷ್ಮಣ ಸವದಿ ವಿಧಾನ ಪರಿಷತ್ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಲಕ್ಷ್ಮಣ ಸವದಿ ಅವರು ಪಕ್ಷದ ಧ್ವಜ ನೀಡುವ ಮೂಲಕ ಕಾಂಗ್ರೆಸ್ಗೆ ಅಧಿಕೃತವಾಗಿ