ಬೆಂಗಳೂರು: ಈಗಾಗಲೇ ನಿಗದಿಪಡಿಸಿರುವಂತೆ ಮೇ 16ರಿಂದ ರಾಜ್ಯದಲ್ಲಿ 1ರಿಂದ 10ನೇ ತರಗತಿ ವರೆಗಿನ ಎಲ್ಲಾ ಮಕ್ಕಳಿಗೂ ಶಾಲೆಗಳು ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಆರಂಭದ ಮುನ್ನಾದಿನ ಮೇ 15ರಂದೇ ಸಂಪೂರ್ಣ ಶಾಲಾ ಸ್ವಚ್ಛತೆ, ತಳಿರು ತೋರಣದ ಸಿಂಗಾರದೊಂದಿಗೆ ಮಕ್ಕಳನ್ನು ಬರಮಾಡಿಕೊಳ್ಳಲು ಅಗತ್ಯಸಿದ್ಧತೆ ಮಾಡಿಕೊಳ್ಳಲು ಶಿಕ್ಷಕರು, ಇತರೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಮೊದಲ ದಿನ ಮೇ 16ರಂದು ಶಾಲೆ ಪ್ರಾರಂಭೋತ್ಸವದ ದಿನವಾಗಿರುತ್ತದೆ. ಅಂದಿನಿಂದಲೇ ಕ್ಷೀರಭಾಗ್ಯ ಮತ್ತು