ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ 9 ರಿಂದ 12 ನೇ ತರಗತಿಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ದಸರಾ ರಜೆಯ ನಂತರ ಸಮವಸ್ತ್ರ ಸಿಗಲಿದೆ ಎನ್ನಲಾಗಿದೆ. ನಾಳೆಯಿಂದ 2021-22ನೇ ಸಾಲಿನ ಭೌತಿಕ ತರಗತಿಗಳು ಪ್ರೌಢಶಾಲೆ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆರಂಭವಾಗಲಿದೆ. ಆದರೆ, ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ, ಸಾಕ್ಸ್ ದಸರಾ ರಜೆಯ ನಂತರ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಸಾಲಿನಲ್ಲಿ ಸುಮಾರು ಸರ್ಕಾರಿ ಶಾಲೆಯ 45 ಲಕ್ಷ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ