ಬೆಂಗಳೂರು: ಯಾವುದೋ ಒಂದು ದಿನ ಶಾಲೆಗಳನ್ನು ಆರಂಭಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸಿದ್ಧತೆಯಾಗಿ ಶಾಲೆಗಳ ಎಲ್ಲ ಸಿಬ್ಬಂದಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಗುರುವಾರ ನಿವಾಸದಲ್ಲಿ ಮಾಧ್ಯಮಗಳ ಮಾತನಾಡಿದ ಸಚಿವರು, ಶಾಲೆಗಳನ್ನು ಯಾವುದೋ ಒಂದು ದಿನ ಆರಂಭಿಸಲೇಬೇಕು. ಮಕ್ಕಳು ಯಾವಾಗಲೂ ಆನ್ ಲೈನ್ ತರಗತಿಯ ಮುಂದೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಆನ್ ಲೈನ್ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ