ಕೋವಿಡ್ -19 ಕಾರಣದಿಂದಾಗಿ ಕಟ್ಟುನಿಟ್ಟಾದ ಮಾರ್ಗಸೂಚಿಗಳ ಹೊರಡಿಸಿ ಪ್ರವಾಸ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಆಯೋಜನೆ ಮಾಡದಂತೆ ಶಾಲೆಗಳಿಗೆ ಆದೇಶ ನೀಡಿದ್ದರೂ ನಗರದ ಶಾಲೆಯೊಂದು 122 ವಿದ್ಯಾರ್ಥಿಗಳನ್ನು 4 ದಿನಗಳ ಕಾಲ ಹೈದರಾಬಾದ್ ಪ್ರವಾಸಕ್ಕೆ ರವಾನಿಸಿ, ಮಕ್ಕಳ ಜೊತೆ ಚೆಲ್ಲಾಟವಾಡುತ್ತಿದೆ.ಬೆಂಗಳೂರು ಉತ್ತರ ಬ್ಲಾಕ್ ಶಿಕ್ಷಣಾಧಿಕಾರಿ ಟಿ ಎನ್ ಕಮಲಾಕರ ಅವರು ಪ್ರತಿಕ್ರಿಯೆ ನೀಡಿ, ಪ್ರವಾಸಕ್ಕೆ ಯಾವುದೇ ಪೂರ್ವಾನುಮತಿ ಪಡೆದಿಲ್ಲದ ಕಾರಣ ನಾವು ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಈಗಾಗಲೇ ಶಾಲಾ ಆಡಳಿತ ಮಂಡಳಿಯ ಅಧಿಕಾರಿಗಳನ್ನು