ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೀಲ್ ಡೌನ್ ಪ್ರದೇಶವನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಭಟ್ಕಳದಲ್ಲಿ ಕಟ್ಟುನಿಟ್ಟಿನ ಸೀಲ್ಡೌನ್ ಜಾರಿಗೊಳಿಸಲಾಗಿದೆ ಎಂದು ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಹೇಳಿದ್ದಾರೆ.ಆರೋಗ್ಯ ಮತ್ತಿತರ ತುರ್ತು ಅಗತ್ಯವಿದ್ದವರು ಸ್ಥಳೀಯ ಪೊಲೀಸ್ ಠಾಣೆ ಅಥವಾ ನೊಡೆಲ್ ಅಧಿಕಾರಿಗಳನ್ನು ಸಂಪರ್ಕಿಸಿ ನೆರವು ಪಡೆಯಬೇಕು. ಕೊರೊನಾ ಪ್ರಕರಣಗಳು ಹೆಚ್ಚು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಬಿಗಿ ಕ್ರಮದ ನಿರ್ಣಯ ಕೈಗೊಳ್ಳಲಾಗಿದೆ.ಈ ಕ್ರಮದಿಂದ ಸಾರ್ವಜನಿಕರಿಗೆ ಕಿರಿಕಿರಿ ಆಗಿರಬಹುದು.