ಕಲಬುರಗಿ : ಗುಜರಾತ್ ನಲ್ಲಿ ನಮ್ಮ ನಿರೀಕ್ಷೆಗಿಂತ ಕಡಿಮೆ ಸ್ಥಾನ ಬಂದಿವೆ. ಈ ಕುರಿತು ಪರಾಮರ್ಶೆ ಮಾಡಲಾಗುವುದು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು. ತಮ್ಮನ್ನು ಭೇಟಿಯಾದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಮಗೆ ಗುಜರಾತ್ನಲ್ಲಿ 80 ರಿಂದ 95 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ನಿರೀಕ್ಷೆಯಂತೆ ಗೆಲ್ಲಲು ಆಗಲಿಲ್ಲ. ಅಲ್ಲಿ ಮೂರು ‘ತ್ರಿ’ ಗಳು ಚೆನ್ನಾಗಿ ಕೆಲಸ ಮಾಡಿವೆ. ಅವುಗಳಿಂದಲೇ ಬಿಜೆಪಿ ಗೆಲುವು ಸಾಧಿಸಿದೆ. ಆ ಮೂರು