ದ್ವಿತೀಯ ಪಿಯುಸಿ ಪರೀಕ್ಷೆ ಗುರುವಾರದಿಂದ ಆರಂಭವಾಗಲಿದ್ದು, ಮಾರ್ಚ್ 29ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಶಿಕ್ಷಣ ಸಚಿವ ಬಿಸಿ ನಾಗೇಶ್ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸಿದ್ಧತೆ ಬಗ್ಗೆ ವಿವರ ನೀಡಿದರು. 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿವೆ. ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿದ್ದು, ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎಂದು ಈ ವ್ಯವಸ್ಥೆ ಮಾಡಿದ್ದೇವೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ