ರಾಜ್ಯ ಪದವಿ ಪೂರ್ಣ ಶಿಕ್ಷಣ ಇಲಾಖೆ ನಡೆಸಿರುವ ಪ್ರಸಕ್ತ 2022ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (2nd puc result) ಪ್ರಕಟಗೊಂಡಿದೆ. ಈ ಬಾರಿ ಶೇ.61.88ರಷ್ಟು ಫಲಿತಾಂಶ ಬಂದಿದ್ದು, ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದು, ಒಟ್ಟು 6,83,563 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇಕಡಾ